ಕೂಡಿಗೆ, ಮೇ 30: ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ಪ್ರಾರಂಭಗೊಂಡ ಕೂಡಿಗೆಯ ಸರ್ಕಾರಿ ಕ್ರೀಡಾ ಪ್ರೌಢಶಾಲೆಗೆ ಜಿಲ್ಲೆಯ 16 ವಿದ್ಯಾರ್ಥಿಗಳು 8ನೇ ತರಗತಿಗೆ ಅರ್ಹತೆ ಪಡೆದಿದ್ದಾರೆ. ಕಳೆದ ತಿಂಗಳು ಕೂಡಿಗೆ ಕ್ರೀಡಾಶಾಲೆಯ ಆವರಣದಲ್ಲಿ ನಡೆದ ರಾಜ್ಯ ಮಟ್ಟದ ಆಯ್ಕೆ ಪರಿಶೀಲನಾ ತರಬೇತಿ ಶಿಬಿರದಲ್ಲಿ ರಾಜ್ಯಮಟ್ಟದಿಂz 260 ವಿದ್ಯಾರ್ಥಿಗಳು ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಹಾಕಿ, ಅಥ್ಲೆಟಿಕ್ಸ್, ವಾಲಿಬಾಲ್, ಜಿಮ್ನಾಸ್ಟಿಕ್ ತರಬೇತಿಯ ಜೊತೆಗೆ ರಾಜ್ಯ ಮಟ್ಟದ ಕ್ರೀಡಾ ಪ್ರೌಢಶಾಲೆಗೆ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಇದರಲ್ಲಿ ಕೊಡಗು ಜಿಲ್ಲೆಯ 16 ವಿದ್ಯಾರ್ಥಿಗಳು ಹಾಕಿ, ಅಥ್ಲೆಟಿಕ್ಸ್, ಜಿಮ್ನಾಸ್ಟಿಕ್‍ಗಳಲ್ಲಿ ಆಯ್ಕೆಗೊಂಡು ಕೂಡಿಗೆ ಕ್ರೀಡಾಶಾಲೆಗೆ ಪ್ರವೇಶ ಪಡೆದಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಪಿಯುಸಿಗೆ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳು ಹಾಕಿ ಮತ್ತು ಅಥ್ಲೆಟಿಕ್ಸ್ ವಿಭಾಗದಲ್ಲಿ ಆಯ್ಕೆಗೊಂಡಿದ್ದಾರೆ.