ಗೋಣಿಕೊಪ್ಪಲು,ಮೇ 30: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಕೊಡಗು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಬಳಿಕ ಮುಂದಿನ ದಿನದಲ್ಲಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಸಂಪೂರ್ಣ ಮಾಹಿತಿಯನ್ನು ಪಕ್ಷದ ಮುಖಂಡರುಗಳ, ಕಾರ್ಯಕರ್ತರ ನಿಯೋಗದೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸುವದಾಗಿ ಹಾಗೂ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಲು ರೈತರ, ಕಾರ್ಮಿಕರ ಒಕ್ಕೂಟದ ನಿಯೋಗವನ್ನು ಬೆಂಗಳೂರಿಗೆ ಕರೆ ತರುವದಾಗಿ ಮನವಿ ಮಾಡಿದ್ದು, ಮುಖ್ಯಮಂತ್ರಿಗಳು ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಸಂಕೇತ್ ಪೂವಯ್ಯ ತಿಳಿಸಿದ್ದಾರೆ.