ಕುಶಾಲನಗರ, ಮೇ 31: ಹುಣ್ಣಿಮೆ ಅಂಗವಾಗಿ ಕೊಪ್ಪ ಬಳಿ ಕಾವೇರಿ ಮಾತೆ ಪ್ರತಿಮೆಗೆ ಅಭಿಷೇಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಬಾರವಿ ಸಂಘದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕರಾದ ಪ್ರಸನ್ನಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.

ಬಾರವಿ ಸಂಘದ ಪದಾಧಿಕಾರಿಗಳಾದ ಬಬೀಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ವಿಜಯೇಂದ್ರ ಪ್ರಸಾದ್, ಎನ್. ಸ್ವಾಮಿ ಮತ್ತಿತರರು ಇದ್ದರು.