ಮಡಿಕೇರಿ, ಮೇ 31: ಮಡಿಕೇರಿ ನಗರ ವ್ಯಾಪ್ತಿಯಲ್ಲಿನ ಕಾಮಗಾರಿ ದುಸ್ಥಿತಿ, ಮಳೆಯಿಂದಾಗುತ್ತಿರುವ ಹಾನಿ ಮುಂತಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ಮನವಿ ಮೇರೆಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ ಬಳಿಕ ಆಯುಕ್ತರು ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವದಾಗಿ ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ತಿಳಿಸಿದ್ದಾರೆ.

ಜೂನ್ 17ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಚುನಾಯಿತ ಪ್ರತಿನಿಧಿಗಳಿಗೆ ಯಾವದೇ ಭೇಟಿ, ಪರಿಶೀಲನೆ ಮಾಡುವಂತಿಲ್ಲ. ಪ್ರತಿನಿತ್ಯ ಚರಂಡಿ, ರಸ್ತೆ ದುರಸ್ತಿ, ರಸ್ತೆ ಬದಿಯ ಕಾಡು ಕಡಿಯದಿರುವ ಬಗ್ಗೆ, ಮಳೆಯಿಂದಾಗುತ್ತಿರುವ ಹಾನಿ ಬಗ್ಗೆ ನಾಗರಿಕರಿಂದ ದೂರುಗಳು ಬರುತ್ತಿದ್ದವು. ಆದರೆ ಅಧಿಕಾರಿಗಳು ಯಾವದೇ ಸ್ಪಂದನ ನೀಡದ ಹಿನ್ನೆಲೆಯಲ್ಲಿ ತಾವು ಹಾಗೂ ಸದಸ್ಯರುಗಳು ಜಿಲ್ಲಾಧಿಕಾರಿಗಳ ಬಳಿ ತೆರಳಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆಯುಕ್ತೆ ಶುಭ ಅವರಿಗೆ ಸೂಚನೆ ನೀಡಿದರು. ಆ ಬಳಿಕ ನಿನ್ನೆ ಅವರು ಅಧಿಕಾರಿಗಳೊಂದಿಗೆ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆಂದು ಕಾವೇರಮ್ಮ ಸೋಮಣ್ಣ ತಿಳಿಸಿದ್ದಾರೆ.