ಮಡಿಕೇರಿ, ಜೂ. 1: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ತಾ. 4 ರಿಂದ ಉಚಿತವಾಗಿ ಸ್ಕಿಲ್ ಡೆವಲಪ್‍ಮೆಂಟ್ ತರಬೇತಿಯನ್ನು ನಡೆಸುತ್ತಿದ್ದು, ಸೇರಲು ಆಸಕ್ತಿಯಿರುವ ವಿದ್ಯಾರ್ಥಿಗಳು ಭಾರತಿ ಕಚೇರಿ, ಸಿಬ್ಬಂದಿ ಇವರ ಬಳಿ ಹೆಸರು ನೋಂದಾಯಿಸಿಕೊಳ್ಳಬಹುದು. ತರಗತಿಯು ಸೋಮವಾರದಿಂದ ಶುಕ್ರವಾರದವರೆಗೆ ಪೂರ್ವಾಹ್ನ 9.30 ಗಂಟೆಗೆ ಪ್ರಾರಂಭಗೊಳ್ಳುತ್ತದೆ.

ಹೊಲಿಗೆ, ಬ್ಯೂಟಿಷಿಯನ್, ಕಂಪ್ಯೂಟರ್, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಹಾಗೂ ಆತಿಥ್ಯ ಕೌಶಲ್ಯ ತರಬೇತಿಯನ್ನು ನೀಡಲಾಗುವದು ಎಂದು ಪ್ರಕಟಣೆ ತಿಳಿಸಿದೆ.