ಮಡಿಕೇರಿ, ಜೂ. 2: ಪ್ರಸಕ್ತ (2018-19) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಜೂ. 5 ರಂದು ಬೆಳಿಗ್ಗೆ 10 ಗಂಟೆಗೆ ನಗರದ ದೇವರಾಜು ಅರಸು ಭವನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿ ನಡೆಯಲಿದೆ.

ಈ ಹಿಂದೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸ್ಥಳಾಂತರಗೊಂಡಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಕೌನ್ಸಿಲಿಂಗ್‍ಗೆ ಕಟ್ ಆಫ್ ರ್ಯಾಂಕ್‍ನ ಒಳಗಿರುವ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ವರ್ಗವಾರು ಮತ್ತು ಲಿಂಗವಾರು ವಿದ್ಯಾರ್ಥಿಗಳು ಮೂಲ ಜಾತಿ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ದೇವರಾಜು ಅರಸು ಭವನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿ ಹಾಜರಾಗಬೇಕೆಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.