ಹೆಬ್ಬಾಲೆ, ಜೂ. 2: ಸಮೀಪದ ಕಣಿವೆ ಗ್ರಾಮದ ಕೆ.ಎನ್. ಶರಣ್ಯಾ ಮತ್ತು ಕೆ.ಎನ್. ನಮಿತಾ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಯೋಗ ಶಿಬಿರದಲ್ಲಿ ಪಾಲ್ಗೊಂಡು ರಾಷ್ಟ್ರೀಯ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಮತ್ತು ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕøತಿಕ 9ನೇ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರು ಕಣಿವೆ ಬಿ.ಎಸ್. ನಂಜುಂಡಸ್ವಾಮಿ ಅವರ ಪುತ್ರಿಯರಾಗಿದ್ದಾರೆ.