ಮಡಿಕೇರಿ, ಜೂ. 2: ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ಪ್ರಾದೇಶಿಕ ವಿಭಾಗದ ಅರಣ್ಯ ವೀಕ್ಷಕ ಒಂದು ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಅಭ್ಯರ್ಥಿಗಳು ತಿತಿತಿ.ಚಿಡಿಚಿಟಿಥಿಚಿ.gov.iಟಿ ಆನ್‍ಲೈನ್ ಮೂಲಕ ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ಮುದ್ರಿತ ಅರ್ಜಿ ಪ್ರತಿ ತೆಗೆದುಕೊಂಡು ಇ-ಪಾವತಿ ಸೌಲಭ್ಯವಿರುವ ಅಂಚೆ ಕಚೇರಿಯಲ್ಲಿ ಮುದ್ರಿತ ಅರ್ಜಿ ಪ್ರತಿಯನ್ನು ತೋರಿಸಿ ಶುಲ್ಕ ಪಾವತಿಸಬೇಕು. ಅರ್ಜಿ ಸಲ್ಲಿಸಲು ಜೂ. 11 ರಿಂದ ಜುಲೈ 10 ರ ಸಂಜೆ 4 ಗಂಟೆಯವರೆಗೆ ಅವಕಾಶ ಹಾಗೂ ಅರ್ಜಿ ಶುಲ್ಕ ಪಾವತಿಸಲು ಜೂನ್ 11 ರಿಂದ ಜುಲೈ 13 ರ ಮಧ್ಯಾಹ್ನ 2.30 ಗಂಟೆಯವರಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.ಚಿಡಿಚಿಟಿಥಿಚಿ.gov.iಟಿ ಅಥವಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕೊಡಗು ವೃತ್ತ, ಮಡಿಕೇರಿ ದೂರವಾಣಿ ಸಂಖ್ಯೆ 08272-225708 ಸಂಪರ್ಕಿಸಬಹುದಾಗಿದೆ.