ಕೂಡಿಗೆ, ಜೂ. 1: ಕೂಡಿಗೆ ಗ್ರಾ.ಪಂ. ವ್ಯಾಪ್ತಿ ಯ ಕೂಡಿಗೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ಸಮೀಪದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರು ಪಡೆಯಲು ಗ್ರಾಮ ಪಂಚಾಯಿತಿಯಿಂದ ಗ್ರಾಮಸ್ಥರಿಗೆ ನೀರಿನ ಕೂಪನ್ ವಿತರಿಸಿದ್ದರೂ ಶುದ್ಧ ನೀರಿನ ಘಟಕದಲ್ಲಿ ನೀರೇ ಇಲ್ಲ. ತಾಲೂಕು ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಅನೇಕ ಕಡೆಯಲ್ಲಿ ಕುಡಿಯುವ ನೀರಿನ ಘಟಕಗಳು ಉದ್ಘಾಟನೆಗೊಂಡು ಸ್ಥಳೀಯರಿಗೆ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರನ್ನು ಒದಗಿಸುತ್ತಿವೆ. ಕೂಡಿಗೆಯ ಈ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ವಿದ್ಯುತ್ ಅಳವಡಿಕೆಯ ನೆಪ ಹೇಳುತ್ತಾ ಆರೇಳು ತಿಂಗಳುಗಳೇ ಕಳೆದು ಆನಂತದ ದಿನಗಳಲ್ಲಿ ನೀರನ್ನು ಒದಗಿಸುವ ವ್ಯವಸ್ಥೆ ಮಾಡಲಾಗಿದ್ದರೂ ನೀರು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.