ಸೋಮವಾರಪೇಟೆ, ಜೂ. 2: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಜೂ. 5 ರಂದು ಪೂರ್ವಾಹ್ನ 10 ಗಂಟೆಗೆ ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಬಿ.ಕೆ. ತಿಮ್ಮಯ್ಯ ತಿಳಿಸಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿಶೆಟ್ಟಿ ವಹಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಂ. ಮಹಮ್ಮದ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ನಿವೃತ್ತ ಡಿ.ಹೆಚ್.ಓ. ಎಸ್. ರಂಗಯ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಅವರುಗಳು ಭಾಗವಹಿಸಲಿದ್ದಾರೆ. ಎಂ.ಎಸ್ಸಿ ನರ್ಸಿಂಗ್‍ನಲ್ಲಿ ಪ್ರಥಮ ರ್ಯಾಂಕ್ ಪಡೆದ ಬಿ. ರಮ್ಯಾ ಬಾಲಕೃಷ್ಣ ಅವರಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಜಿ.ಬಿ. ಗುರಪ್ಪ, ಎಸ್.ಎನ್. ಶಿವಕುಮಾರ್, ಡಿ.ಪಿ. ಉತ್ತಯ್ಯ, ಬಿ.ಎಸ್. ನಿರ್ಮಲ, ಕಮಲಾಕ್ಷಮ್ಮ ಅವರುಗಳನ್ನು ಸನ್ಮಾನಿಸಲಾಗುವದು ಎಂದು ತಿಮ್ಮಯ್ಯ ತಿಳಿಸಿದ್ದಾರೆ.