ನಾಪೆÇೀಕ್ಲು, ಜೂ. 2: ನಾಪೆÇೀಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಬೇತು ಸರಕಾರಿ ಪ್ರಾಥಮಿಕ ಶಾಲೆ ಮತ್ತು ಚೆರಿಯಪರಂಬು ಸರಕಾರಿ ಶಾಲೆಯ ಮಕ್ಕಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಮತ್ತು ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ನಾಪೆÇೀಕ್ಲು ನಗರದಲ್ಲಿ ಜಂಟಿಯಾಗಿ ಶಾಲಾ ದಾಖಲಾತಿ ಆಂದೋಲನ ಮೆರವಣಿಗೆ ನಡೆಸಿ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಎಂಬ ಘೋಷಣೆಯೊಂದಿಗೆ ಜಾಗೃತಿ ಮೂಡಿಸಿದರು.