ಸಿದ್ದಾಪುರ, ಜೂ. 2: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗ್ರಾ.ಪಂ ಉಪಾಧ್ಯಕ್ಷರು ಗಂಭೀರ ಗಾಯಗೊಂಡ ಘಟನೆ ಸಿದ್ದಾಪುರದಲ್ಲಿ ನಡೆದಿದೆ.ಸಿದ್ದಾಪುರ ಗ್ರಾ.ಪಂ. ಉಪಾಧ್ಯಕ್ಷೆ ರಾಜೇಶ್ವರಿ ಎಂಬವರು ಅಂಬೇಡ್ಕರ್ ನಗರದ ತನ್ನ ನಿವಾಸದ ಮುಂಭಾಗದಲ್ಲಿ ಇದ್ದ ವೇಳೆ ಅಪರಿಚಿತ ಕಾರೊಂದು ರಾಜೇಶ್ವರಿ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ರಾಜೇಶ್ವರಿ ಅವರು ಗಂಭೀರ ಗಾಯಗೊಂಡಿದ್ದು, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.