ಸೋಮವಾರಪೇಟೆ, ಜೂ. 3: ತಾಲೂಕು ಕಾನೂನು ಸೇವಾ ಸಮಿತಿ, ಸೋಮವಾರಪೇಟೆ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾ. 5 ರಂದು ಚಿಕ್ಕಅಳುವಾರದಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ 1,500 ಸಸಿ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ಕಾರ್ಯಾಗಾರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಆರಂಭವಾಗುವ ಕಾರ್ಯಕ್ರಮವನ್ನು ಸೋಮವಾರಪೇಟೆ ಜೆಎಂಎಫ್ಸಿಯ ಹಿರಿಯ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎಸ್.ಎಸ್. ಭರತ್, ವಲಯ ಅರಣ್ಯಾಧಿಕಾರಿ ಲಕ್ಷ್ಮೀಕಾಂತ್ ಪಾಲ್ಗೊಳ್ಳಲಿದ್ದಾರೆ.