ಮಡಿಕೇರಿ, ಜೂ. 3: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸಕ್ತ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ಅರಿವು ಸಾಲ (ವಿದ್ಯಾರ್ಭಯಾಸ ಸಾಲ) ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು hಣಣಠಿ://ಞmಜಛಿ.ಞಚಿಡಿ.ಟಿiಛಿ.iಟಿ/ಚಿಡಿivu2 ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರಿವು ಯೋಜನೆಯಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಿಇಟಿ ಮತ್ತು ಎನ್‍ಇಟಿ ಹಾಜರಾದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನಿಗಮದಿಂದ ಸಾಲ ಸೌಲಭ್ಯ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ರಾಮಮಂದಿರ ಹಿಂಭಾಗ, ಹೊಟೇಲ್ ಹಿಲ್ ವ್ಯೂ ಹತ್ತಿರ, ಮಡಿಕೇರಿ, ದೂರವಾಣಿ ಸಂಖ್ಯೆ 08272-220449 ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ನಾಗೇಂದ್ರ ತಿಳಿಸಿದ್ದಾರೆ.