ಸೋಮವಾರಪೇಟೆ, ಜೂ. 3: ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ ಸಾರ್ವಜನಿಕರಿಗೆ ಯೋಗದ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಲು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಇಲ್ಲಿನ ಹೋಮಿಯೋಪಥಿ ಆಸ್ಪತ್ರೆ ಆವರಣದಲ್ಲಿ ಉಚಿತ ಯೋಗ ತರಬೇತಿ ಶಿಬಿರ ಆರಂಭಗೊಂಡಿದೆ.
ಸಂಸ್ಥೆಯ ಸಂಚಾಲಕಿ ರಾಗಿಣಿ ಅವರು ಯೋಗ, ಧ್ಯಾನ, ಪ್ರಾಣಾಯಾಮಗಳ ವಿವಿಧ ಪ್ರಾಕಾರಗಳ ಬಗ್ಗೆ ಪ್ರತಿದಿನ ಬೆಳಗ್ಗೆ 5.30 ರಿಂದ 6.30 ಹಾಗೂ ಸಂಜೆ 6 ರಿಂದ 7 ಗಂಟೆಯವರೆಗೆ ತರಬೇತಿ ನೀಡಲಾಗುತ್ತಿದೆ.
ತಾ. 21ರಂದು ಸೋಮವಾರಪೇಟೆಯಲ್ಲಿ ಯೋಗ ದಿನಾಚರಣೆ ನಡೆಯಲಿದ್ದು, ಶಿಬಿರದ ಪೂರ್ವ ಸಿದ್ದತೆಯಾಗಿ ಯೋಗ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದು ಎಂದು ರಾಗಿಣಿ ಅವರು ತಿಳಿಸಿದ್ದಾರೆ.