ಮಡಿಕೇರಿ, ಜೂ. 3 : ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.11 ಇಂಚು ಕಳೆದ ವರ್ಷ ಇದೇ ದಿನ 0.21 ಇಂಚು, ಜನವರಿಯಿಂದ ಇಲ್ಲಿಯವರೆಗಿನ ಮಳೆ 16.84 ಇಂಚು ಕಳೆದ ವರ್ಷ ಇದೇ ಅವಧಿಯಲ್ಲಿ 12.38 ಇಂಚು ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.17 ಇಂಚು ಕಳೆದ ವರ್ಷ ಇದೇ ದಿನ 0.41 ಇಂಚು, ಜನವರಿಯಿಂದ ಇಲ್ಲಿಯವರೆಗಿನ ಮಳೆ 24.38 ಇಂಚು, ಕಳೆದ ವರ್ಷ ಇದೇ ಅವಧಿಯಲ್ಲಿ 14.33 ಇಂಚು ಮಳೆಯಾಗಿತ್ತು.
ವೀರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.11 ಇಂಚು, ಕಳೆದ ವರ್ಷ ಇದೇ ದಿನ 0.19 ಇಂಚು, ಜನವರಿಯಿಂದ ಇಲ್ಲಿಯವರೆಗಿನ ಮಳೆ 12.41 ಇಂಚು, ಕಳೆದ ವರ್ಷ ಇದೇ ಅವಧಿಯಲ್ಲಿ 12.26 ಇಂಚು ಮಳೆಯಾಗಿತ್ತು. ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.32 ಇಂಚು, ಕಳೆದ ವರ್ಷ ಇದೇ ದಿನ 0.02 ಇಂಚು, ಜನವರಿಯಿಂದ ಇಲ್ಲಿಯವರೆಗಿನ ಮಳೆ 13.73 ಇಂಚು, ಕಳೆದ ವರ್ಷ ಇದೇ ಅವಧಿಯಲ್ಲಿ 10.55 ಇಂಚು ಮಳೆಯಾಗಿತ್ತು.