ಮಡಿಕೇರಿ, ಜೂ. 3: 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಕನ್ನಡ ಭಾಷಾ ವಿಷಯದಲ್ಲಿ ಶೇ. 100 ಅಂಕ ಪಡೆದ ಪಡೆದ ವಿದ್ಯಾರ್ಥಿಗಳಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಪ್ರೆಸ್‍ಕ್ಲಬ್ ಸಹಯೋಗದೊಂದಿಗೆ ತಾ. 10 ರಂದು ನಗರದ ಪತ್ರಿಕಾ ಭವನದಲ್ಲಿ ಕನ್ನಡ ವಿಷಯಗಳಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ-ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಕನ್ನಡ ವಿಷಯದಲ್ಲಿ (125ಕ್ಕೆ 125) ಹಾಗೂ ಪಿಯುಸಿಯಲ್ಲಿ (100 ಕ್ಕೆ 100) ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಉದ್ದೇಶಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆಯಾ ವಿದ್ಯಾಸಂಸ್ಥೆಗಳ ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರು ದೃಢೀಕರಿಸಿದ ಅಂಕಪಟ್ಟಿ ನಕಲು ಪ್ರತಿಯನ್ನು ತಾ. 8 ರೊಳಗೆ ಕನ್ನಡ ಸಾಹಿತ್ಯ ಪರಿಷತ್ ಕಚೇರಿ, ಕೋಟೆ ಆವರಣ, ಮಡಿಕೇರಿ ಇಲ್ಲಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗೆ 9742632283, 8277066123 ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್ ತಿಳಿಸಿದ್ದಾರೆ.