ಸೋಮವಾರಪೇಟೆ, ಜೂ. 3: ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜು ತಿಳಿಸಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳು ಸ್ವ ವಿವರಗಳೊಂದಿಗೆ ಇತ್ತೀಚಿನ ಭಾವಚಿತ್ರ, ದೃಢೀಕರಿಸಿದ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿಯನ್ನು ತಾ. 20 ರೊಳಗಾಗಿ ಅಖಿಲಭಾರತ ವೀರಶೈವ ಮಹಾಸಭಾ, ನಂ 17/4, ವೀರಶೈವ ಲಿಂಗಾಯತ ಭವನ, ಸದಾಶಿವ ನಗರ, ಬೆಂಗಳೂರು-560080 ಈ ವಿಳಾಸಕ್ಕೆ ಕಳುಹಿಸಬಹುದು. ಅಥವಾ ಮಹಾಸಭಾದ ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕವೂ ಸಲ್ಲಿಸಬಹುದಾಗಿದೆ ಎಂದು ಕಾಂತರಾಜ್ ತಿಳಿಸಿದ್ದಾರೆ.