ಸೋಮವಾರಪೇಟೆ, ಜೂ. 3: ಇಲ್ಲಿನ ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ತಾ. 5 ರಂದು ಪಟ್ಟಣದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಆರಂಭವಾಗುವ ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಈರಪ್ಪ ವಹಿಸಲಿದ್ದು, ಸಭೆಯಲ್ಲಿ 2018-19ನೇ ಸಾಲಿನ ನೂತನ ಆಡಳಿತ ಮಂಡಳಿಯನ್ನು ರಚಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.