ಗುಡ್ಡೆಹೊಸೂರು, ಜೂ. 3: ಇಲ್ಲಿಗೆ ಸಮೀಪದ ರಂಗಸಮುದ್ರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.

ಗ್ರಾಮ ಪಂಚಾಯಿತಿ ಸದಸ್ಯೆ ಮಲ್ಲಿಗೆ ಶಾಲಾ ಮಕ್ಕಳಿಗೆ ಸಿಹಿ ನೀಡಿ ಬರಮಾಡಿಕೊಂಡರು. ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಮಚಂದ್ರ, ಸಮಿತಿ ಸರ್ವ ಸದಸ್ಯರು ಹಾಜರಿದ್ದು, ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ವಿತರಿಸಿದರು. ಮುಖ್ಯ ಶಿಕ್ಷಕಿ ಜಯಂತಿ ಬಿ.ಜಿ. ವಂದಿಸಿದರು.

ಈ ಸಂದರ್ಭ ಶಾಲಾ ಶಿಕ್ಷಕ ವೃಂದ ಹಾಜರಿದ್ದು ಮಕ್ಕಳಿಗೆ ಶುಭಕೋರಿದರು.