ಕುಶಾಲನಗರ, ಜೂ. 4: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಆಶ್ರಯದಲ್ಲಿ ಸ್ವಚ್ಚ ಕಾವೇರಿ ಹಾಗೂ ಸ್ವಚ್ಚ ಪರಿಸರಕ್ಕಾಗಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ತಾ. 5 ರಂದು (ಇಂದು) ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪುರಸಭೆ ಶ್ರೀರಂಗಪಟ್ಟಣ ಮತ್ತಿತರ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರು ಅರಮನೆ ಬಳಿಯಿಂದ ಶ್ರೀರಂಗಪಟ್ಟಣ ತನಕ ಜಾಥಾ ನಡೆಯಲಿದೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಪಟ್ಟಣ ಪಂಚಾಯ್ತಿ, ಶರಣ ಸಾಹಿತ್ಯ ಪರಿಷತ್ ವತಿಯಿಂದ ಇಂದು ಗುಂಡೂರಾವ್ ಬಡಾವಣೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.