ಮಡಿಕೇರಿ, ಜೂ. 5: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿ ಇಲ್ಲಿನ ಸೆಮಿನಾರ್ ಹಾಲ್ನಲ್ಲಿ ವಿಶ್ವವಿದ್ಯಾನಿಲಯದ ಇತ್ತೀಚೆಗೆ ಕುಲಪತಿ ಪ್ರೊ. ಕೆ. ಬೈರಪ್ಪ ಅವರಿಗೆ ಸನ್ಮಾನ-ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ ಅವರು ವಹಿಸಿದ್ದರು. ಸಮಾರಂಭದಲ್ಲಿ ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು, ಪೋಷಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪ್ರೊ. ಕೆ. ಭೈರಪ್ಪ ಅವರು ತಾವು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಾಡಿದ ಸಾಧನೆಯ ಕುರಿತು ಮಾತನಾಡಿದರು.