ಮಡಿಕೇರಿ, ಜೂ. 5: ಕುಶಾಲನಗರ ಮತ್ತು ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಅಧೀಕ್ಷಕ ಇಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಯನ್ನು ತಾ. 7 ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಸಲಾಗುವದು.
ಕುಶಾಲನಗರ ಹಾಗೂ ಸೋಮವಾರಪೇಟೆ ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಬಹುದು ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.