ಕುಶಾಲನಗರ, ಜೂ. 5: ಕುಶಾಲನಗರ ಸಮಸ್ತ ಮಹಿಳಾ ಭಜನಾ ಮಂಡಳಿ ಆಶ್ರಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.
ಮೈಸೂರಿನಿಂದ ದೇವರ ವಿಗ್ರಹ ಮತ್ತು ಯತಿವರ್ಯರು ಆಗಮಿಸಿದ ಸಂದರ್ಭ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳುವದರೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಯಿತು. ಕುಶಾಲನಗರದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಭಜನಾ ಮಂಡಳಿ ಸದಸ್ಯರುಗಳು ಸುತ್ತಮುತ್ತಲ ವ್ಯಾಪ್ತಿಯ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು. ಕಲ್ಯಾಣೋತ್ಸವ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯ ನಡೆಯಿತು.