ಮಡಿಕೇರಿ, ಜೂ. 6: ಅಖಿಲಭಾರತ ಕಾಂಗ್ರೆಸ್ ಸಮಿತಿಯ ಅನುಮೋದನೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆ.ಪಿ.ಸಿ.ಸಿ.) ಸಹ ಸದಸ್ಯರಾಗಿ ಬೆಂಗಳೂರಿನ ಯಶವಂತಪುರದಲ್ಲಿರುವ ಕೊಡಗಿನವರಾದ ಕದ್ದಣಿಯಂಡ ಹರೀಶ್ ಬೋಪಣ್ಣ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೀತಾರಾಂ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಹರೀಶ್ ಬೋಪಣ್ಣ ಅವರು ವೀರಾಜಪೇಟೆ ಕ್ಷೇತ್ರದಿಂದ ಶಾಸಕ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಕೆ.ಪಿ.ಸಿ.ಸಿ. ಅಧ್ಯಕ್ಷ ಜಿ. ಪರಮೇಶ್ವರ್ ಅವರು ಈ ಹಿಂದೆಯೇ ಈ ಆದೇಶ ಹೊರಡಿಸಿದ್ದರಾದರೂ, ಇದೀಗ ಅಧಿಕೃತಗೊಳಿಸಲಾಗಿದೆ.