ಕುಶಾಲನಗರ, ಜೂ. 6: ಆರ್ಟ್ ಆಫ್ ಲಿವಿಂಗ್ ಆಶ್ರಯದಲ್ಲಿ ಕಾವೇರಿ ನದಿ ತಟದ ಪುನಶ್ಚೇತನ ಯೋಜನೆಯ ಅಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ತಾ. 7 ರಂದು (ಇಂದು) ಕುಶಾಲನಗರದಲ್ಲಿ ಚಾಲನೆ ನೀಡಲಾಗುವದು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಗ್ರೀನ್ ಸಿಟಿ ಫೋರಂ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಹಯೋಗದೊಂದಿಗೆ ನಡೆಯಲಿರುವ ಪರಿಸರ ಆಂದೋಲನ ಕಾರ್ಯಕ್ರಮದಲ್ಲಿ ಕಾವೇರಿ ನದಿ ತಟದಲ್ಲಿ ಸುಮಾರು 1.5 ಲಕ್ಷ ಗಿಡ ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿದ್ದು, ಜಿಲ್ಲೆಯ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಿರಂತರವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ ಎಂದು ಆರ್ಟ್ ಆಫ್ ಲಿವಿಂಗ್ ಜಿಲ್ಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೊಂಗೇಟಿರ ಬೋಪಯ್ಯ ತಿಳಿಸಿದ್ದಾರೆ.
ಕುಶಾಲನಗರದ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವದು ಎಂದು ಅವರು ಮಾಹಿತಿ ನೀಡಿದ್ದಾರೆ.