ಮಡಿಕೇರಿ, ಜೂ. 6: ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಒಳಪಟ್ಟಿರಬೇಕು. ವರ್ಗ-1 ರ ಅಭ್ಯರ್ಥಿಗಳಿಗೆ ಆದಾಯ ಮಿತಿ ರೂ. 3.50 ಲಕ್ಷ ಆಗಿರುತ್ತದೆ. ವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವದು. ವರ್ಗ-1 ರಲ್ಲಿ ಅರ್ಹ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಯಮಾನುಸಾರ ಇತರ ವರ್ಗಗಳಲ್ಲಿ ಆಯ್ಕೆ ಮಾಡಲಾಗುವದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ವಕೀಲರಾಗಿ ಕಾರ್ಯನಿರ್ವಹಿಸಲು ನಿಗದಿಪಡಿ ಸಲಾದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷದ ಒಳಗಿರುವವರು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅಭ್ಯರ್ಥಿಯು ಗರಿಷ್ಠ ವಯೋಮಿತಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 38 ವರ್ಷದೊಳಗಿರಬೇಕು ಹಾಗೂ ವರ್ಗ-1 ರ ಅಭ್ಯರ್ಥಿಗೆ 40 ವರ್ಷ ಇರುತ್ತದೆ. ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ 4 ಸಾವಿರರಂತೆ ಶಿಷ್ಯವೇತನ ನೀಡಲಾಗುವದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯಿಂದ ಹಿಂದುಳಿದ ವರ್ಗಗಳ 11 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅವಕಾಶವಿರುತ್ತದೆ.
ಅರ್ಜಿ ನಮೂನೆಗಳನ್ನು ಆಗಸ್ಟ್ 31 ರೊಳಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಇಲ್ಲಿ ಸಲ್ಲಿಸಬೆಕು. ಹೆಚ್ಚಿನ ಮಾಹಿತಿಗಾಗಿ 08272-225628 ನ್ನು ಸಂಪರ್ಕಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.