ಶನಿವಾರಸಂತೆ, ಜೂ. 6 : ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಾರಳ್ಳಿ ಮತ್ತಿತರ ಗ್ರಾಮಗಳ ಕಾಫಿ ತೋಟಗಳಲ್ಲಿ ದೈತ್ಯ ಬಸವನ ಹುಳುವಿನ ಬಾಧೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಶನಿವಾರಸಂತೆ ಕಾಫಿ ಮಂಡಳಿ ವಿಸ್ತರಣಾ ಹಾಗೂ ಸಂಶೋಧನಾ ವಿಭಾಗ ಈ ಬಗ್ಗೆ ಮಾಹಿತಿ ಹಾಗೂ ಹತೋಟಿ ಕ್ರಮಗಳು ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಂಡಿದೆ.
ಈ ಕಾರ್ಯಾಗಾರ ತಾ. 7ರಂದು (ಇಂದು) ಬೆಳಿಗ್ಗೆ 10.30ಕ್ಕೆ ಹಂಡ್ಲಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಾಗಾರದಲ್ಲಿ ಕಾಫಿ ಮಂಡಳಿ ವಿಜ್ಞಾನಿಗಳು ಮತ್ತು ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ.