ಕುಶಾಲನಗರ, ಜೂ. 6: ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಿ ಸಂಘಟನೆಯ ಒಕ್ಕೂಟದ ಕೊಡಗು ಜಿಲ್ಲಾ ಘಟಕದ ಮೂಲಕ ಕುಶಾಲನಗರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳಿಗೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಪಟ್ಟಣದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳದ ಅಭಾವವಿದ್ದು ಅವರುಗಳಿಗೆ ಶಾಶ್ವತ ನೆಲೆ ಕಲ್ಪಿಸಬೇಕು. ಪ್ರಮಾಣಪತ್ರ ಹಾಗೂ ಗುರುತಿನ ಚೀಟಿ ನೀಡಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಆರ್.ಜಗದೀಶ್ ಮನವಿ ಪತ್ರ ನೀಡಿದರು. ಜಿಲ್ಲಾ ಘಟಕದ ಉಸ್ತುವಾರಿ ಕೆ.ರವಿ, ಉಪಾಧ್ಯಕ್ಷ ಕೆ.ಕೆ.ದಿನೇಶ್ ಮತ್ತಿತರರು ಇದ್ದರು.