ಗೋಣಿಕೊಪ್ಪಲು: ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ಘೋಷಣೆಯೊಂದಿಗೆ ಎಲ್ಲೆಡೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲ್ಪಡುತ್ತಿದೆ. ನಾವು ಪ್ರಕೃತಿಯನ್ನು ಪೂಜಿಸುವದನ್ನು, ಗೌರವಿಸುವದನ್ನು ರೂಢಿಸಿಕೊಂದು ದಬ್ಬಾಳಿಕೆ ನಿಲ್ಲಿಸಬೇಕು. ಇಲ್ಲವೆ ವಿನಾಶ ಖಚಿತ ಎಂದು ವೀರಾಜಪೇಟೆಯ ಪಕ್ಷಿತಜ್ಞ ಡಾ. ನರಸಿಂಹನ್ ಅಭಿಪ್ರಾಯ ಪಟ್ಟರು.
ಇಲ್ಲಿನ ಕಳತ್ಮಾಡು ಲಯನ್ಸ್ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ಆಶ್ರಯದಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪ್ರಕೃತಿಯ ವಿಸ್ಮಯಗಳನ್ನು ಅರಿತುಕೊಳ್ಳಲು ಮುಂದಾಗಬೇಕು.ಕೇವಲ ಒಂದು ದಿನದ ಪರಿಸರ ದಿನಾಚರಣೆಯಿಂದ ಸಂರಕ್ಷಣೆ ಅಸಾಧ್ಯ. ವರ್ಷದ 365 ದಿನವೂ ನಾವು ಪರಿಸರ ಕಾಳಜಿಯೊಂದಿಗೆ ಭೂಮಿಯ ಮೇಲಿನ ದಬ್ಬಾಳಿಕೆ ನಿಲ್ಲಿಸದೆ ಹೋದಲ್ಲಿ ನಾವು ಬದುಕಲು ಅರ್ಹರಲ್ಲ ಎಂದರು.
ಲಯನ್ಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಕೆ.ಸಿ. ಪವಿತ್ರಾ ಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.
ಪತ್ರಕರ್ತ ಟಿ.ಎಲ್ .ಶ್ರೀನಿವಾಸ್ ಇದೇ ಸಂದರ್ಭ ನಿಫಾ, ಹಂದಿಜ್ವರ ಇತ್ಯಾದಿ ಕಾಯಿಲೆಗಳಿಗೆ ರಾಮಬಾಣವಾದ ಅಮೃತ ಬಳ್ಳಿ, ಜಾಂಡೀಸ್ ನಿರೋಧಕ ನೆಲನೆಲ್ಲಿ ಹಾಗೂ ಮಿದುಳಿನ ಶಕ್ತಿ ವೃದ್ಧಿಸುವ, ಮಾನಸಿಕ ಒತ್ತಡ ನಿವಾರಿಸುವ ಬ್ರಾಹ್ಮಿ (ಒಂದೆಲಗ) ಔಷಧಿ ಸಸ್ಯಗಳ ಮಹತ್ವ ಕುರಿತು ವಿವರಿಸಿದರು.
ಸ್ವಾಗತ ನಿರೂಪಣೆ ಧಾಮಿನಿ ದೇಚಮ್ಮ, ಪ್ರಾಸ್ತಾವಿಕ ಸಿಯಾ ಮುತ್ತಮ್ಮ, ಇಕೋ ಕ್ಲಬ್ ವರದಿ ಎಂ.ಸಿ.ಹರ್ಷಿತಾ ಹಾಗೂ ವಿಸ್ಮಯ ಗಂಗಮ್ಮ ವಂದಿಸಿದರು.ನಾಪೋಕ್ಲು: ವಿಶ್ವ ಪರಿಸರದ ದಿನದ ಅಂಗವಾಗಿ ನಾಪೆÇೀಕ್ಲು ಸ. ಪ್ರೌಢ ಶಾಲೆಯ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಪರಿಸರ ಜಾಗೃತಿ ಮೂಡಿಸುವ ಬಗ್ಗೆ ವಿವಿಧ ಘೋಷಣೆಯೊಂದಿಗೆ ನಗರದಲ್ಲಿ ಜಾಥ ನಡೆಸಿ ಜಾಗೃತಿ ಮೂಡಿಸಿದರು.ಕಾನ್ಬೈಲ್: ಪ್ಲಾಸ್ಟಿಕ್ ಮಾಲಿನ್ಯ ಹಿಮ್ಮೆಟ್ಟಿಸುವ ಧ್ಯೇಯ ವಾಕ್ಯದೊಂದಿಗೆ ವಿಶ್ವ ಪರಿಸರ ದಿನವನ್ನು ಸರ್ಕಾರಿ ಪ್ರೌಢಶಾಲೆ ಕಾನ್ಬೈಲ್ನಲ್ಲಿ ಆಚರಿಸಲಾಯಿತು. ಪರಿಸರ ಸಂರಕ್ಷಣೆಯ ಘೋಷವಾಕ್ಯಗಳೊಂದಿಗೆ ಕಾನ್ಬೈಲ್ನ ಬೀದಿಗಳಲ್ಲಿ ಜಾಥಾ ತೆರಳಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿದರು. 9ನೇ ತರಗತಿಯ ವಿದ್ಯಾರ್ಥಿ ರಿಯಾಜ್ ಮತ್ತು ಶಾಲೆಯ ವಿಜ್ಞಾನ ಶಿಕ್ಷಕಿ ಮಾಲಾದೇವಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು.
ನಂತರ ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಸಂದರ್ಭ ಮುಖ್ಯ ಶಿಕ್ಷಕ ಮಂಜೇಶ್ ಮತ್ತು ಶಿಕ್ಷಕ ವೃಂದದವರು ಹಾಜರಿದ್ದರು.ಸಿದ್ದಾಪುರ: ಸಿದ್ದಾಪುರ ಪ್ರೌಢಶಾಲೆ ಹಾಗೂ ಬಿ.ಜಿ.ಎಸ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಬಾಬು ನಾಯ್ಕ್, ವ್ಯವಸ್ಥಾಪಕ ಸುಧಾಕರ್, ರಾಮಕೃಷ್ಣ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.ಸಂರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದು ಹೇಳಿದರು. ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಕೆ. ಕುಮಾರ್ ಮಾತನಾಡಿ, ಪ್ರಕೃತಿ ನಾಶವಾಗುತ್ತಾ ಹೋದಂತೆ ಜೀವ ಸಂಕುಲ ನಾಶವಾಗುತ್ತದೆ. ಜಾಗತೀಕ ತಾಪಮಾನದಿಂದಾಗಿ ಮುಂಬರುವ ದಿನಗಳಲ್ಲಿ ಪ್ರತಿಯೊಬ್ಬರು ಪರಿಸರದ ಸವಾಲುಗಳನ್ನು ಎದುರಿಸ ಬೇಕಾಗುತ್ತದೆ ಎಂದರು.
ವಿದ್ಯಾರ್ಥಿಗಳು ಗಿಡಗಳನ್ನು ರಕ್ಷಿಸಿ ಪೋಷಿಸುವ ಬಗ್ಗೆ ಪ್ರತಿಜ್ಞೆ ಕೈಗೊಂಡರು. ಪ್ರತಿ ವಿದ್ಯಾರ್ಥಿಗೂ ಒಂದೊಂದು ಗಿಡದ ಜವಬ್ದಾರಿ ನೀಡಲಾಯಿತು. ಮುಖ್ಯ ಅತಿಥಿಗಳಾದ ವಿಜಯ, ಶಿಕ್ಷಕರಾದ ಆಶಾಮಣಿ, ಚೇತನ್ ಕುಮಾರ್, ಶೋಭಾ, ಜಯಲಕ್ಷ್ಮಿ, ಗಂಗಮ್ಮ, ಸರೋಜ, ಸುರೇಶ್ ಇದ್ದರು.ಕುಶಾಲನಗರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ಹಾಗೂ ಸ್ಥಳೀಯ ಎಸ್ಎಲ್ಎನ್ ಸಂಸ್ಥೆ ಸಹಯೋಗದೊಂದಿಗೆ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಬೀದಿಯಲ್ಲಿ ಮೆರವಣಿಗೆ ತೆರಳಿ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಕೈಚೀಲಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಲಾಯಿತು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್, ಅಭಿಯಂತರರಾದ ಶ್ರೀದೇವಿ, ಬಿ.ಜಿ. ಸತೀಶ್, ಸಿಬ್ಬಂದಿಗಳು, ಎಸ್ಎಲ್ಎನ್ ಸಂಸ್ಥೆಯ ನೌಕರ ವರ್ಗದವರು ಇದ್ದರು.ಕೂಡಿಗೆ: ಸಮೀಪದ ವಾಲ್ನೂರು-ತ್ಯಾಗತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಗೂ ಪ್ರೇರಣಾ ಇಕೋ ಕ್ಲಬ್ ಉದ್ಘಾಟನಾ ಸಮಾರಂಭ ನಡೆಯಿತು.
ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು.
ನಂತರ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿದ್ದ ಪತ್ರಕರ್ತ ಅಂಚೆಮನೆ ಸುಧಿ ಮಾತನಾಡಿ, ಜೀವ ಸಂಕುಲಗಳನ್ನು ಕಾಪಾಡುವ ಭೂಮಿಯು ಮನುಷ್ಯರ ದುರಾಸೆಯಿಂದ, ಸ್ವಾರ್ಥದಿಂದ ನಾಶವಾಗುತ್ತಿದೆ. ನಾವುಗಳು ಮರ-ಗಿಡಗಳನ್ನು ನೆಟ್ಟು ಪರಿಸರವನ್ನು ಸುಂಟಿಕೊಪ್ಪ: ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚು ಗಿಡಮರಗಳನ್ನು ಬೆಳೆಸುವ ಮೂಲಕ ಪರಿಸರದಲ್ಲಿ ಪ್ಲಾಸ್ಟಿಕ್ಮೂಲಕ ಪರಿಸರದಲ್ಲಿ ಪ್ಲಾಸ್ಟಿಕ್ ಮಾಲಿನ್ಯ ತಡೆ ಗಟ್ಟಲು ಎಲ್ಲರೂ ಕೈ ಜೋಡಿಸಬೇಕು ಎಂದು ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷ ಣಾಧಿಕಾರಿ ಎಂ.ಎಲ್. ಮಂಜುನಾಥ್ ಸುಂಟಿಕೊಪ್ಪದಲ್ಲಿ ಹೇಳಿದರು.
ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಕುಶಾಲನಗರ ವಲಯ ಅರಣ್ಯಾಧಿಕಾರಿಗಳ ಕಚೇರಿ ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ, ಇಕೋ ಕ್ಲಬ್ ರಾಜ್ಯ ವಿಜ್ಞಾನ ಪರಿಷತ್ ಘಟಕ, ಜೆಸಿಐ ಸಂಸ್ಥೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಖ್ಯ ಶಿಕ್ಷಕ ಬಾಲಕೃಷ್ಣ ಮಾತನಾಡಿ ಗಿಡ ಮರಗಳು ನಮ್ಮ ಅಸ್ತಿತ್ವಕ್ಕೆ ಅತ್ಯಗತ್ಯವಾದ ಆಮ್ಲಜನಕದ ಆಡಂಬೋಲಗಳಾಗಿದ್ದು ಮುಂದಿನ ಪೀಳಿಗೆಯ ಅಸ್ತಿತ್ವ ಮತ್ತು ನೆಮ್ಮದಿಗೆ ಅತ್ಯಮೂಲ್ಯ ಸಂಪತ್ತಾಗಿದೆ ಎಂದರು.
ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮ್ ಕುಮಾರ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಗಿಡ ನೆಡುವ ಮೂಲಕ ತಮ್ಮನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಎಸ್ಡಿಎಂಸಿ ಮಾಜಿ ಅಧ್ಯಕ್ಷ ಎಂ.ಎ. ಉಸ್ಮಾನ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶಾಲೆಯನ್ನು ಪ್ಲಾಸ್ಟಿಕ್ ಮುಕ್ತ ಶಾಲೆಯನ್ನಾಗಿ ರೂಪುಗೊಳಿಸಬೇಕೆಂದರು. ಕುಶಾಲನಗರ ವಲಯ ಅರಣ್ಯಾಧಿಕಾರಿ ಸಿ.ಆರ್. ಅರುಣ್ ಪರಿಸರ ಘೋಷಣೆಗಳ ಕುರಿತು ಕರಪತ್ರ ಬಿಡುಗಡೆಗೊಳಿಸಿದರು.
ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಿ.ಎ. ಗೀತಾ, ಪೂಣಚ್ಚ, ಮಂಜೇಗೌಡ, ಶಿಕ್ಷಕರಾದ ಎಂ.ಎನ್. ಲತಾ, ಎಸ್.ಕೆ. ಸೌಭಾಗ್ಯ, ಪಿ.ಇ. ನಂದ, ಪುಷ್ಪ ಇತರರು ಇದ್ದರು.ಶನಿವಾರಸಂತೆ: ಶನಿವಾರಸಂತೆಯ ತ್ಯಾಗರಾಜ ಕಾಲೋನಿಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಕ್ಷೇತ್ರ ಶಿಕ್ಷಣ ಸಂಯೋಜಕ ಕೆ. ಮೂರ್ತಿ, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ. ವಿದ್ಯಾರ್ಥಿಗಳಿಗೆ ಪರಿಸರ ರಕ್ಷಣೆ ಕುರಿತು ಶಿಕ್ಷಕರು ಮತ್ತು ಪೋಷಕರು ಅತ್ಯಗತ್ಯವಾಗಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದರು.
ಈ ಸಂದರ್ಭ ಕ್ಷೇತ್ರ ಶಿಕ್ಷಣ ಇಲಾಖೆಯ ಬಿಆರ್ಪಿ ಹೆಚ್.ಟಿ. ನಾಗರಾಜು, ಸಿಆರ್ಪಿಗಳಾದ ನಿರ್ಮಲ, ಶಿವಲಿಂಗ, ಡಿ.ಎಂ. ಚಿಣ್ಣಪ್ಪ, ಮಧುಕುಮಾರ್, ಮುಖ್ಯಶಿಕ್ಷಕಿ ಡಿ.ಎಂ. ಜಯಮ್ಮ ಮತ್ತು ಶಿಕ್ಷಕರುಗಳು ಪಾಲ್ಗೊಂಡಿದ್ದರು.ಗೋಣಿಕೊಪ್ಪ ವರದಿ: ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧೆಡೆ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು.
ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿಯಿಂದ ಗೋಣಿಕೊಪ್ಪಲುವಿನ ಮಾದಪ್ಪ ಪೆಟ್ರೋಲ್ ಬಂಕ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾಮಿ ವಿವೇಕಾನಂದ ಆರೋಗ್ಯ ಕೇಂದ್ರದ ಡಾ. ಚಂದ್ರಶೇಖರ್, ಜಿ.ಪಂ. ಸದಸ್ಯ ಬಾನಂಡ ಪೃಥ್ಯು ಹಾಗೂ ಪ್ರಗತಿಪರ ರೈತ ಚೆಪ್ಪುಡಿರ ಸುಜು ಕರುಂಬಯ್ಯ ಸಸಿಯನ್ನು ನೀಡುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೆಟ್ರೋಲ್ ಬಂಕ್ಗೆ ಆಗಮಿಸಿದವರಿಗೆ ವಿವಿಧ ಜಾತಿಯ ಕಾಡು ಮರಗಳ ಸಸಿಗಳನ್ನು ನೀಡುವದರ ಮೂಲಕ ವಿಶ್ವ ಪರಿಸರ ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ಜೆಸಿಐ ಪೊನ್ನಂಪೇಟೆಯ ಅಧ್ಯಕ್ಷ ಎಂ.ಡಿ. ನಂಜಪ್ಪ, ಕಾರ್ಯದರ್ಶಿ ನಟೇಶ್, ಮಾದಪ್ಪ ಪೆಟ್ರೋಲ್ ಬಂಕ್ನ ಮಾಲೀಕ ಮಚ್ಚಮಾಡ ಅನೀಶ್ ಮಾದಪ್ಪ ಹಾಗೂ ಸದಸ್ಯರು ಭಾಗವಹಿಸಿದರು.
ಗೋಣಿಕೊಪ್ಪಲು ಪ್ರೌಢ ಶಾಲೆಯಲ್ಲಿ ಟೈಗರ್ ಪಗ್ ಪರಿಸರ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ಮುಖ್ಯ ಅತಿಥಿಯಾಗಿ ಉರಗ ತಜ್ಞ ಹಾಗೂ ಗೌರವನ್ವಿತ ವನ್ಯಜೀವಿ ಪರಿಪಾಲಕ ಕೆ.ಎನ್. ಬೋಸ್ ಮಾದಪ್ಪ ಭಾಗವಹಿಸಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿ ಕೊಳ್ಳುವಂತೆ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದರು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಎಂ. ತಿಮ್ಮಯ್ಯ, ವನ್ಯಜೀವಿ ಛಾಯಾಗ್ರಾಹಕ ದಿಲನ್ ಮಂದಣ್ಣ, ಪರಿಸರ ಸಂಘದ ಸಂಚಾಲಕ ಕೃಷ್ಣ ಚೈತನ್ಯ ಹಾಗೂ ಶಿಕ್ಷಕ ವೃಂದ ಪಾಲ್ಗೊಂಡರು. ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಗಿಡ ನೆಡುವದರ ಮೂಲಕ ಪರಿಸರ ದಿನಾಚರಣೆ ಯನ್ನು ಆಚರಿಸಲಾಯಿತು. ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಹಾಗೂ ಎನ್ಎಸ್ಎಸ್ ಅಧಿಕಾರಿ ತಿರುಮಲಯ್ಯ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆಯ ಬಗ್ಗೆ ಅರಿವು ಮೂಡಿಸಿದರು. ಸ್ವಯಂಸೇವಕರು ಕಾಲೇಜು ಆವರಣವನ್ನು ಸ್ವಚ್ಛಗೊಳಿಸುವದರ ಮೂಲಕ ಪರಿಸರ ಪ್ರಜ್ಞೆಯನ್ನು ಮೆರೆದರು.ಸುಂಟಿಕೊಪ್ಪ: ಶಾಲಾ ಕಾಲೇಜಿನ ವಿದ್ಯಾರ್ಥಿಗಳು ದಿನನಿತ್ಯದ ಚಟುವಟಿಕೆಯಲ್ಲಿ ಪರಿಸರಕ್ಕೆ ಮಾಲಿನ್ಯವುಂಟುಮಾಡುವ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವ ಮೂಲಕ ಸ್ವಚ್ಛ ಹಾಗೂ ಸುಂದರ ಪರಿಸರÀ ನಿರ್ಮಿಸಲು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಸೋಮವಾರಪೇಟೆ ತಾಲೂಕು ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ ಹೇಳಿದರು.
ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಸಂಜೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ, ಕೊಡಗು ಪ್ರಾದೇಶಿಕ ನಿಯಂತ್ರಣ ಕಛೇರಿ, ಅರಣ್ಯ ಇಲಾಖೆ ಹಾಗೂ ಶಾಲೆಯ ಇಕೋ ಕ್ಲಬ್ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ 2018 ಅಂಗವಾಗಿ “ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟಿ” ಎಂಬ ಉದ್ಘೋಷಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಪರಿಸರ ನಡಿಗೆಗೆ ಚಾಲನೆ ನೀಡಿ ಮಾತನಾಡಿದÀರು.
ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಕುರಿತು ಮಾಹಿತಿ ನೀಡಿದ ಇಕೋ ಕ್ಲಬ್ನ ಸಂಚಾಲಕ ಶಿಕ್ಷಕ ಟಿ.ಜಿ. ಪ್ರೇಮ್ ಕುಮಾರ್ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸಲು ವಿದ್ಯಾರ್ಥಿಗಳು ಪಣತೋಡಬೇಕೆಂದರು.
ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪಿ.ಇ. ನಂದ ಇದ್ದರು.ದೊಡ್ಡತ್ತೂರು: ಕುಶಾಲನಗರ ಸಮೀಪದ ದೊಡ್ಡತ್ತೂರು ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಕರ್ನಾಟಕ ಕಾವಲು ಪಡೆಯ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ, ಲೇಖನಿ ಸಾಮಗ್ರಿ ವಿತರಣೆ ನಡೆಯಿತು.
ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟರು. ನಂತರ ನಡೆದ ಸರಳ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ಹಾಗೂ ಲೇಖನಿ ಸಾಮಗ್ರಿ ವಿತರಣೆ ನಡೆಯಿತು.
ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕ ಎಸ್.ಸಿ. ಗೋವಿಂದರಾಜು, ಶಿಕ್ಷಕರಾದ ಚಂದ್ರಿಕಾ, ಮಂಜುಳಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷೆ ಸುಮಿತ್ರ, ಕರ್ನಾಟಕ ಕಾವಲುಪಡೆಯ ಜಿಲ್ಲಾ ಕಾರ್ಯದರ್ಶಿ ಕುಮಾರ್, ಮಹಿಳಾ ಘಟಕದ ಕೊಡಗು ಜಿಲ್ಲಾ ಅಧ್ಯಕ್ಷೆ ಲಲಿತಾ, ಸದಸ್ಯೆ ಪ್ರೇಮಾ,ಪ್ರಮುಖರಾದ ಮುರುಗೇಶ್, ಅಂಗಮುತ್ತು, ಮಂಜುಳಾ, ಪೂರ್ಣಿಮಾ ಮತ್ತಿತರರು ಇದ್ದರು.ಮೂರ್ನಾಡು: ಮೂರ್ನಾಡು ವಿದ್ಯಾಸಂಸ್ಥೆಯ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪ್ರೌಢಶಾಲೆಯ ಚಿಗುರು ಇಕೋ ಕ್ಲಬ್ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಪುದಿಯೊಕ್ಕಡ ಸಿ. ಸುಬ್ರಮಣಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಶಿಕ್ಷಕಿ ಎ.ಟಿ. ಗೀತಾ ವಿಶ್ವ ಪರಿಸರ ದಿನದ ಮಹತ್ವದ ಕುರಿತು ಮಾತನಾಡಿದರು. ಶಾಲಾ ಆವರಣದ ಸುತ್ತಲು ವಿವಿಧ ರೀತಿಯ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಗಿಡ ನೀಡಿದ ದಾನಿ ಕಿಗ್ಗಾಲು ಹರೀಶ್, ಶಾಲಾ ಶಿಕ್ಷಕ ಹೆಚ್.ಬಿ. ಕೃಷ್ಣಪ್ಪ, ಎಸ್.ಡಿ. ಪ್ರಶಾಂತ್, ಎ.ಜಿ. ಗಣೇಶ್, ಪುಷ್ಪವೇಣಿ, ತೇಜಸ್ವಿನಿ, ಉಪನ್ಯಾಸಕ ಹರ್ಷ ಮಂದಣ್ಣ, ಕೆ.ಎಸ್. ಪ್ರದೀಪ್ ಇತರರು ಹಾಜರಿದ್ದರು.