ಕುಶಾಲನಗರ, ಜೂ. 7: ಕುಶಾಲನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಯೋಜನೆ ತಕ್ಷಣ ಪೂರ್ಣಗೊಳಿಸುವಂತೆ ಒತ್ತಾಯಿಸಿ ತಾ. 11 ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ನಡೆಯಲಿರುವ ಧರಣಿ ಕಾರ್ಯಕ್ರಮ ಪಟ್ಟಣದ ಕಾರ್ ಸ್ಟ್ಯಾಂಡ್ ಆವರಣದಲ್ಲಿ ಅಂದು ಬೆಳಿಗ್ಗೆ 11 ಗಂಟೆಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಆರಂಭಗೊಳ್ಳಲಿದೆ ಎಂದು ಸಮಿತಿಯ ಸಂಚಾಲಕ ಕೆ.ಜಿ. ಮನು ತಿಳಿಸಿದ್ದಾರೆ.

ಅಂದಾಜು 50 ಕೋಟಿ ರೂ ವೆಚ್ಚದ ಕಾಮಗಾರಿ ಕಳೆದ ಕೆಲವು ತಿಂಗಳಿನಿಂದ ಸ್ಥಗಿತಗೊಂಡಿದ್ದು ಸಂಬಂಧಿಸಿದ ಅಧಿಕಾರಿಗಳು ಮೌನವಹಿಸಿದ್ದಾರೆ. ಕೂಡಲೆ ಕಾಮಗಾರಿ ಪೂರ್ಣಗೊಳಿಸಿ ಯೋಜನೆ ಲೋಕಾರ್ಪಣೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಇತ್ತೀಚೆಗೆ ಮನವಿ ಸಲ್ಲಿಸಲಾಗಿತ್ತು.