ಮಡಿಕೇರಿ, ಜೂ. 7: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ವಕೀಲರ ಸಂಘ, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಘ, ಸಮಾಜ ಕಲ್ಯಾಣ ನಗರಸಭೆ, ಒಡಿಪಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ’ ದಿನಾಚರಣೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಬಗ್ಗೆ ‘ಕಾನೂನು ಅರಿವು-ನೆರವು’ ಕಾರ್ಯಕ್ರಮವು ತಾ. 12 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕಾಡ್ಲೂರು ಸತ್ಯ ನಾರಾಯಣಾಚಾರ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನೂರುನ್ನೀಸಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ರಮೇಶ್ ಪಿ. ಕೋನರೆಡ್ಡಿ, ಕಾರ್ಮಿಕ ಇಲಾಖೆ ಅಧಿಕಾರಿ ಎಂ.ಎಚ್. ರಾಮಕೃಷ್ಣ ಇತರರು ಪಾಲ್ಗೊಳ್ಳಲಿದ್ದಾರೆ.