ವೀರಾಜಪೇಟೆ, ಜೂ. 7: ಪಟ್ಟಣದ ಜೈನರ ಬೀದಿಯಲ್ಲಿನ ಚಾಣಕ್ಯ ಎಜುಕೇಶನ್ ಟ್ರಸ್ಟ್‍ನ ವತಿಯಿಂದ ತಾ. 10 ರಂದು ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆಯ ಕುರಿತ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್‍ನ ಅಧ್ಯಕ್ಷೆ ಸಿ.ಎನ್. ಕವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಟ್ಟಣದ ಜೈನರ ಬೀದಿಯಲ್ಲಿನ ಕಲ್ಪವೃಕ್ಷ ಆರ್ಕೆಡ್ ಕಟ್ಟಡದಲ್ಲಿನ ಟ್ರಸ್ಟ್‍ನ ಸಭಾಂಗಣದಲ್ಲಿ ತಾ. 10 ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 1 ರವರೆಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗದೆ. ಮೈಸೂರು ಹಾಗೂ ಮಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಗಾರದಲ್ಲಿ ಭಾಗವಹಿಸಲಿದ್ದಾರೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಚಿತವಾಗಿ ಭಾಗವಹಿಸಬಹುದು. ನೋಂದಾಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8277496007 ಅನ್ನು ಸಂಪರ್ಕಿಸಬಹುದು.