ಕುಶಾಲನಗರ, ಜೂ. 7: ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರ ಚುನಾವಣೆ ಪ್ರಚಾರ ಸಂದರ್ಭ ಹಣ ಹಂಚಿದ ಆರೋಪದ ಮೇಲೆ ಪೊಲೀಸರ ವಶದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಪ್ರಚಾರ ಸಂದರ್ಭ ಇಬ್ಬರು ಶಿಕ್ಷಕರಿಗೆ ಹಣದ ಆಮಿಷ ಒಡ್ಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕುಮಾರ್ ದೂರಿನ ಮೇರೆಗೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು.

ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಠಾಣಾಧಿಕಾರಿ ಜಗದೀಶ್ ತಿಳಿಸಿದ್ದಾರೆ.

ಸ್ಪಷ್ಟನೆ: ಕುಶಾಲನಗರ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಚುನಾವಣೆ ಪ್ರಚಾರ ಸಂದರ್ಭ ಹಣ ಹಂಚಿದ ಘಟನೆ ನಡೆದಿರುವದಿಲ್ಲ ಎಂದು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಪಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ತಮ್ಮ ಶಾಲೆಯ ಹೆಸರಿನಲ್ಲಿ ಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ವರದಿಯಾಗಿರುವದು ಸತ್ಯಕ್ಕೆ ದೂರವಾದ ವಿಷಯ ಎಂದಿದ್ದಾರೆ.