ಕುಶಾಲನಗರ, ಜೂ. 8: ಕುಶಾಲನಗರ ವ್ಯಾಪ್ತಿಯ ಕಾವೇರಿ ನದಿ ತಟದಲ್ಲಿ ಮತ್ತು ಆನೆಕಾಡು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ತಾ. 9 ರಿಂದ ಎರಡು ದಿನಗಳ ಕಾಲ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ, ಅರಣ್ಯ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕುಶಾಲನಗರ ಪಟ್ಟಣ ಪಂಚಾಯಿತಿ, ಆರ್ಟ್ ಆಫ್ ಲಿವಿಂಗ್, ಕಾವೇರಿ ನದಿ ಸ್ವಚ್ಛತಾ ಆಂದೋಲನ, ಗ್ರೀನ್ ಸಿಟಿ ಫೋರಂ ಸಂಸ್ಥೆಯ ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕೊಡಗು ಜಾವ ಯಜ್ಡಿ ಮೋಟಾರ್ ಸೈಕಲ್ ಕ್ಲಬ್, ಕೊಡವಾಮೆಯ 50 ಕ್ಕೂ ಅಧಿಕ ಸದಸ್ಯರು ಎರಡು ದಿನಗಳ ಕಾಲ ಸಾವಿರಕ್ಕೂ ಅಧಿಕ ಗಿಡಗಳು ಹಾಗೂ ಸೀಡ್ ಬಾಲ್ ಬಿತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.