ನಾಪೆÇೀಕ್ಲು, ಜೂ. 8: ನಾಪೆÇೀಕ್ಲು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾ. 24ರ ಭಾನುವಾರ ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ತಾಲೂಕು ಮಟ್ಟದ ರಸ ಪ್ರಶ್ನೆ ಸ್ವರ್ಧೆಯನ್ನು ಏರ್ಪಡಿಸಲಾಗಿದೆ.
ವಿಜೇತರಿಗೆ ಆಕರ್ಷಕ ಬಹುಮಾನ ನೀಡಲಾಗುತ್ತಿದ್ದು, ಆಸಕ್ತರು ತಾ. 20ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳವಂತೆ ನಾಪೆÇೀಕ್ಲು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕೋರಿದ್ದಾರೆ. ಸಂಪರ್ಕಿಸಬೇಕಾದ ಮೊ. ಸಂಖ್ಯೆ 9900370842. 9448582369.