ಮಡಿಕೇರಿ, ಜೂ. 10: ವೀರಾಜಪೇಟೆ ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ತಾ. 12 ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ವೀರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುವದು. ಗೋಣಿಕೊಪ್ಪಲು ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ತಾ. 12 ರಂದು ಅಪರಾಹ್ನ 1 ಗಂಟೆಯಿಂದ 2 ಗಂಟೆವರೆಗೆ ಗೋಣಿಕೊಪ್ಪಲು ಉಪ ವಿಭಾಗ ಕಚೇರಿ ಆವರಣದಲ್ಲಿ ಸಭೆ ನಡೆಸಲಾಗುವದು. ವೀರಾಜಪೇಟೆ ಹಾಗೂ ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು-ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು.