ಮಡಿಕೇರಿ, ಜೂ. 10: ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿ.ಜೆ.ಪಿ. ಅಭ್ಯರ್ಥಿಗಳು ಗೆಲವು ಸಾಧಿಸಿರುವ ಹಿನ್ನೆಲೆ ತಾ. 15 ರಂದು ಮಡಿಕೇರಿ ತಾಲೂಕು ಬಿ.ಜೆ.ಪಿ. ಕಾರ್ಯಕರ್ತರ ಅಭಿನಂದನಾ ಸಮಾವೇಶ ಏರ್ಪಡಿಸಲಾಗಿದೆ ಎಂದು ತಾಲೂಕು ಬಿ.ಜೆ.ಪಿ. ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ತಿಳಿಸಿದ್ದಾರೆ.
ತಾ. 15 ರಂದು ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಏರ್ಪಡಿಸಿರುವ ಸಮಾವೇಶದಲ್ಲಿ ನೂತನವಾಗಿ ಆಯ್ಕೆಗೊಂಡಿರುವ ಶಾಸಕತ್ರಯರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಸುಳ್ಯ ಕ್ಷೇತ್ರದ ಎಸ್. ಅಂಗಾರ ಸೇರಿದಂತೆ ಬಿ.ಜೆ.ಪಿ.ಯ ಇತರ ಮುಖಂಡರು, ಜನಪ್ರತಿನಿಧಿಗಳು, ಪಕ್ಷದ ವಿವಿಧ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ತಾ. 19 ರಂದು ಗೋಣಿಕೊಪ್ಪಲು: ವೀರಾಜಪೇಟೆ ತಾಲೂಕು ಬಿ.ಜೆ.ಪಿ. ಕಾರ್ಯಕರ್ತರ ಸಮಾವೇಶವನ್ನು ತಾ. 19 ರಂದು ಹಗಲು 11 ಗಂಟೆಗೆ ಗೋಣಿಕೊಪ್ಪಲುವಿನ ಪರಿಮಳ ಮಂಗಳ ವಿಹಾರದಲ್ಲಿ ಏರ್ಪಡಿಸಲಾಗಿದೆ. ಜಿಲ್ಲೆಯ ಶಾಸಕರು, ಸಂಸದರು, ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿ.ಜೆ.ಪಿ. ಅಧ್ಯಕ್ಷ ಅರುಣ್ ಭೀಮಯ್ಯ ಹಾಗೂ ಪ್ರಮುಖರು ತಿಳಿಸಿದ್ದಾರೆ.