ಸೋಮವಾರಪೇಟೆ, ಜೂ. 13: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ವಿಷಯದಲ್ಲಿ 125 ಹಾಗೂ ಪಿ.ಯು.ಸಿ.ಯಲ್ಲಿ 100 ಅಂಕಗಳಿಸಿದ ತಾಲೂಕಿನ ವಿದ್ಯಾರ್ಥಿಗಳನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾ. 23 ರಂದು ಸನ್ಮಾನಿಸಲಾಗುವದು ಎಂದು ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ತಿಳಿಸಿದ್ದಾರೆ.
ಇಲ್ಲಿನ ಕಸಾಪ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30ಕ್ಕೆ ಇಲ್ಲಿನ ಸಾಹಿತ್ಯ ಪರಿಷತ್ ಭವನದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗು ವದು. ಇದೇ ಸಂದರ್ಭ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷ ಡಾ. ಜಿ.ಎಸ್. ಪರಮೇಶ್ ಅವರನ್ನು ಸನ್ಮಾನಿಸಲಾಗುವದು. ಸಮಾರಂಭಕ್ಕೆ ತಾಲೂಕು ತಹಶೀಲ್ದಾರ್ ವೀರೇಂದ್ರ ಬಾಡ್ಕರ್ ಪಾಲ್ಗೊಳ್ಳಲಿದ್ದಾರೆ ಎಂದರು.