ಕುಶಾಲನಗರ, ಜೂ. 13: ಕುಶಾಲನಗರ ಒಳಚರಂಡಿ ಯೋಜನೆ ಕಾಮಗಾರಿ ಕೂಡಲೆ ಪೂರ್ಣಗೊಳಿಸುವಂತೆ ಆಗ್ರಹಿಸಿ ಕುಶಾಲನಗರ ಹಿತರಕ್ಷಣಾ ವೇದಿಕೆ ಸದಸ್ಯರು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಸಿರಿದೆ.
ಹಿತರಕ್ಷಣಾ ಸಮಿತಿ ಸಂಚಾಲಕ ಕೆ.ಜಿ.ಮನು ನೇತೃತ್ವದಲ್ಲಿ ಸ್ಥಳೀಯ ಕಾರು ನಿಲ್ದಾಣದ ವೇದಿಕೆಯಲ್ಲಿ ಸತ್ಯಾಗ್ರಹ ಕೈಗೊಂಡಿರುವ ವೇದಿಕೆ ಪ್ರಮುಖರು ಭಜನೆ, ಗಾಯನಗಳ ಮೂಲಕ ಧರಣಿ ಸತ್ಯಾಗ್ರಹ ಮುಂದುವರೆಸಿದ್ದಾರೆ. ಕಾವಲುಪಡೆ ಸಂಘಟನೆಯ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ವಿಜಯಕುಮಾರ್, ಕಲಾವಿದರಾದ ರಂಗಸ್ವಾಮಿ, ಸುರೇಶ್ ಅವರು ಗಾಯನದ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ಪ್ರಮುಖರಾದ ಎಂ.ಎಸ್.ರಾಜೇಶ್, ಹರೀಶ್, ಮಂಜು, ಕೆ.ಎಸ್.ನಾಗೇಶ್, ಉಮಾಶಂಕರ್, ಎಂ.ಕೃಷ್ಣ, ಭಾಸ್ಕರ್ ನಾಯಕ್, ನಂಜುಂಡಸ್ವಾಮಿ, ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಸಂಚಾಲಕ ಎಂ.ಎನ್.ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಕಾರು ಮಾಲೀಕರ ಸಂಘದ ಅಧ್ಯಕ್ಷ ಕೆ.ಎನ್. ಅಶೋಕ್, ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗದೀಶ್ ಮತ್ತಿತರರು ಇದ್ದರು.
ಧರಣಿ ಕಾರ್ಯಕ್ರಮ ಇಂದು ಸಹ ಮುಂದುವರೆದಿದ್ದು, ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪೂರಕ ಪ್ರತಿಕ್ರಿಯೆ ಬರದಿದ್ದಲ್ಲಿ ಕುಶಾಲನಗರ ಬಂದ್ಗೆ ಕರೆ ನೀಡಲಾಗುವದು. ನಂತರ ಕುಶಾಲನಗರದಿಂದ ಬೆಂಗಳೂರಿಗೆ ವಾಹನ ಜಾಥಾ ಮೂಲಕ ತೆರಳಿ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವದು ಎಂದು ವೇದಿಕೆ ಸಂಚಾಲಕ ಕೆ.ಜಿ.ಮನು ತಿಳಿಸಿದ್ದಾರೆ.