ಕುಶಾಲನಗರ, ಜೂ. 13: ಕೊಡಗು ಜಿಲ್ಲಾ ಬಿಜೆಪಿಯ ಪರಿಶಿಷ್ಟ ಜಾತಿ ಘಟಕದ ಕುಶಾಲನಗರ ಹೋಬಳಿ ಅಧ್ಯಕ್ಷರಾಗಿ ಎಸ್.ಕೆ. ಪ್ರಸನ್ನ ಅವರನ್ನು ನೇಮಕಗೊಳಿಸಲಾಗಿದೆ.
ಎಸ್‍ಸಿ ಘಟಕದ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಅವರ ಶಿಫಾರಸಿನ ಮೇರೆಗೆ ಜಿಲ್ಲಾ ಬಿಜೆಪಿ ಎಸ್‍ಸಿ ಘಟಕದ ಅಧ್ಯಕ್ಷ ಸತೀಶ್ ಕುಮಾರ್ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.