ಮಡಿಕೇರಿ, ಜೂ. 13: ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯ (ಐಟಿಡಿಪಿ) ಯೋಜನಾ ಸಮನ್ವಯಾಧಿಕಾರಿಯಾಗಿ ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.
ಶಿವಕುಮಾರ್ ಅವರು ಈ ಹಿಂದೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಐಟಿಡಿಪಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಗೆಯೇ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಕಳೆದ ಎರಡು ವರ್ಷóಗಳಿಂದ ಐಟಿಡಿಪಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಕಾಶ್ ಅವರು ಐಟಿಡಿಪಿ ಇಲಾಖೆಯ ನಿರ್ದೇಶಕರ ಕಚೇರಿಗೆ ವರ್ಗಾವಣೆಗೊಂಡಿದ್ದಾರೆ.
ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವ ಸಂದರ್ಭ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಚಿಕ್ಕಬಸವಯ್ಯ, ಚಂದ್ರಶೇಖರ, ರಂಗನಾಥ್ ಇತರರು ಇದ್ದರು.