ಕುಶಾಲನಗರ, ಜೂ. 14: ಕುಶಾಲನಗರದ ಫಾತಿಮಾ ಕಾನ್ವೆಂಟ್ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾನ್ವೆಂಟ್ ಪ್ರಾಂಶುಪಾಲೆ ಸಿಸ್ಟರ್ ಜಸ್ವಿನ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶಾಲೆಯಿಂದ ಕುಶಾಲನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಪರಿಸರ ಘೋಷಣೆಗಳ ಫಲಕಗಳನ್ನು ಹಿಡಿದು ಜಾಗೃತಿ ಮೂಡಿಸಿದರು. ಈ ಸಂದರ್ಭ ಶಾಲೆಯ ಶಿಕ್ಷಕರಾದ ಸಿಬಿ, ಕೃಪಾ, ನೇತ್ರಾವತಿ ಮತ್ತಿತರರು ಇದ್ದರು.