ಸುಂಟಿಕೊಪ್ಪ, ಜೂ. 14: ವಿದ್ಯಾದೇಗುಲಕ್ಕೆ ರಾತ್ರಿ ವೇಳೆ ಕಿಡಿಗೇಡಿಗಳು ಬಂದು ಪೀಠೋಪಕರಣಗಳನ್ನು, ಕಿಟಕಿ ಗಾಜುಗಳನ್ನು ಒಡೆದು ಹಾಕಿ ಶಾಲಾ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳ ನೋಟ್ ಪುಸ್ತಕವನ್ನು ಹರಿದು ಹಾಕಿ ವಿಕೃತ ಮನೋಧಾಷ್ಟ್ರ್ಯ ಪ್ರದರ್ಶಿಸಿದ ಘಟನೆ ನಡೆದಿದೆ. ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ಇಲಾಖೆ ರಾತ್ರಿ ವೇಳೆ ಈ ಶಾಲೆಯ ಬಳಿ ಪೊಲೀಸ್ ಗಸ್ತು ವ್ಯವಸ್ಥೆ ಮಾಡಬೇಕೆಂದು ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಆಗ್ರಹಿಸಿದ್ದಾರೆ.