ಮಡಿಕೇರಿ, ಜೂ. 20: ಜಿಲ್ಲೆಯಲ್ಲಿ ತಾ. 21 ರಿಂದ 28 ರ ವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲ ಪ್ರೌಢಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮತ್ತು ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ನಡೆಯಲಿದೆ.

ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ತಾ. 21 ರಿಂದ 28 ರ ವರೆಗೆ ಈ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯಾದ ಪಿ.ಐ. ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.