ಸೋಮವಾರಪೇಟೆ, ಜೂ. 30: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುತ್ತಿರುವ ವಾರ್ಷಿಕ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ ಅವರು ತಮ್ಮ ತಂದೆ-ತಾಯಿ ತೇಲಪಂಡ ಶಾರದಾ ಮತ್ತು ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ಮೌಲ್ಯವುಳ್ಳ ವರದಿ, ಶನಿವಾರಸಂತೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ತಮ್ಮ ತಂದೆ ಹೆಚ್.ಎಸ್.ರಾಮೇಗೌಡ ಹೆಸರಿನಲ್ಲಿ ಸ್ಥಾಪಿಸಿದ ಅತ್ಯುತ್ತಮ ಗ್ರಾಮೀಣ ವರದಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದರೊಂದಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ತಮ್ಮ ತಂದೆ-ತಾಯಿ ಬಿ.ಕೆ.ಸುಬ್ಬಯ್ಯ - ಜಯಮ್ಮ ಹೆಸರಿನಲ್ಲಿ ಪ್ರಾರಂಭಿಸಿರುವ ಅರಣ್ಯ-ಪರಿಸರ ಮತ್ತು ವನ್ಯ ಜೀವಿ ವಿಭಾಗದ ವರದಿ, ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎಸ್.ಎ.ಮುರುಳೀಧರ್ ತಮ್ಮ ತಂದೆ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಪ್ರಾರಂಭಿಸಿರುವ ಅತ್ಯುತ್ತಮ ಕ್ರೀಡಾವರದಿ ಹಾಗೂ ಶಕ್ತಿ ಪತ್ರಿಕೆ ವರದಿಗಾರ ಎಂ.ಎನ್. ಚಂದ್ರಮೋಹನ್ ತಮ್ಮ ತಂದೆ ತಾಯಿ ಎಂ.ನಾರಾಯಣ ಮತ್ತು ಎಂ.ಪದ್ಮಾವತಿ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ತನಿಖಾ ವರದಿಗೆ ತಾಲೂಕಿನ ಪತ್ರಕರ್ತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು. ವರದಿಗಳು 2017ರ ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡಿರಬೇಕು. ಅರ್ಜಿ ಸಲ್ಲಿಸುವವರು ಜುಲೈ 10ರೊಳಗಾಗಿ 3 ಪ್ರತಿಗಳೊಂದಿಗೆ ಸೋಮವಾರಪೇಟೆಯ ಪತ್ರಿಕಾ ಭವನ ಕಚೇರಿಗೆ ತಲುಪಿಸಬೇಕೆಂದು ಸಂಘದ ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರÀಗಳಿಗೆ 9448325945 ಅಥವಾ 9972717450 ಈ ಸಂಖ್ಯೆಗೆ ಸಂಪರ್ಕಿಸಲು ಕೋರಿದೆ.