ವೀರಾಜಪೇಟೆ, ಜೂ. 30: ಇಲ್ಲಿನ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ. ಮೋಹನ್ ಮೇ 31 ರಂದು ನಿವೃತ್ತಿ ಹೊಂದಿದ್ದು, ಇವರ ಸ್ಥಾನಕ್ಕೆ ನೂತನ ಪ್ರಾಂಶುಪಾಲರಾಗಿ ಪ್ರೊ. ಎನ್.ಕೆ. ಜ್ಯೋತಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದೇ ಕಾಲೇಜಿನಲ್ಲಿ ಕಳೆದ 20 ವರ್ಷಗಳಿಂದ ಜೀವಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ತಾ. 21 ರಿಂದ ಅಧಿಕಾರ ವಹಿಸಿಕೊಂಡಿದ್ದಾರೆ.