ಮಡಿಕೇರಿ, ಜೂ. 30: ಕೃಷಿ ಇಲಾಖೆ ವತಿಯಿಂದ ತಾ. 3 ರಂದು ಬೆಳಿಗ್ಗೆ 10.30 ಗಂಟೆಗೆ ಬೇಂಗೂರು ಗ್ರಾಮ ಪಂಚಾಯಿತಿಯ ಕೊಟ್ಟೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ “ಕೃಷಿ ಅಭಿಯಾನ” ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕೃಷಿ ಮತ್ತು ಕೃಷಿ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು-ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.