ಸುಂಟಿಕೊಪ್ಪ, ಜು. 3: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವವರು ಸದಾ ಒತ್ತಡದ ನಡುವೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದು ಕುಶಾಲನಗರ ವೃತ್ತ ನಿರೀಕ್ಷಕ ಕ್ಯಾತೇಗೌಡ ಹೇಳಿದರು.ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಎಎಸ್ಐಯಾಗಿ ಕಳೆದ 2 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಗುಣಶೇಖರ ಅವರು ನಿವೃತ್ತರಾಗಿದ್ದು, ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯ ಸೇವೆ ಸವಾಲಿನ ಕೆಲಸ ಎಂದರು.
ಠಾಣಾಧಿಕಾರಿ ಜಯರಾಂ ಮಾತನಾಡಿ ತಾನು ಹೊರ ಜಿಲ್ಲೆಗೆ ಕಾರ್ಯನಿಮಿತ್ತ ತೆರಳಿದ್ದಾಗ ಗುಣಶೇಖರ್ ಠಾಣೆಯ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮೇಲಾಧಿಕಾರಿಗಳ ಸಲಹೆ ಸೂಚನೆಯಂತೆ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಎಸ್ಐಗಳಾದ ಪಾರ್ಥ, ಕಾವೇರಪ್ಪ ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.