ಮಡಿಕೇರಿ, ಜು. 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಫಾಯಿ ಕರ್ಮಚಾರಿ, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸಂಬಂಧ ಇರುವ ಕಾನೂನುಗಳು, ಸರ್ಕಾರದ ವಿವಿಧ ಇಲಾಖೆಗಳು ನೀಡುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಕಾರ್ಯಾಗಾರ ತಾ. 6 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿ.ಪಂ. ಸಿಇಓ ಪ್ರಶಾಂತ್‍ಕುಮಾರ್ ಮಿಶ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ.